Breaking
19 Sep 2026, Sat

ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಢಿಕ್ಕಿ – ಪೋಷಕರ ವಿರುದ್ಧ ಪ್ರಕರಣ ದಾಖಲು

ಮಣಿಪಾಲ: ಪರ್ಕಳ ನೇತಾಜಿ ನಗರ ಪ್ರದೇಶದಲ್ಲಿ ಅಪ್ರಾಪ್ತ ಬಾಲಕನೊಬ್ಬ ಚಲಾಯಿಸುತ್ತಿದ್ದ ಕಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಸ್ಕೂಟರ್‌ಗೆ ಢಿಕ್ಕಿ ಹೊಡೆದ ಘಟನೆ ನಡೆದಿದೆ. ಈ ಸಂಬಂಧ ಬಾಲಕ ಹಾಗೂ ಆತನ ಪೋಷಕರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿಯ ಪ್ರಕಾರ, ನೇತಾಜಿ ನಗರ ಕಡೆಯಿಂದ ಪ್ರಗತಿ ನಗರದ ಕಡೆಗೆ ಬಡಗುಬೆಟ್ಟು ಗ್ರಾಮದ ಅಪ್ರಾಪ್ತ ಬಾಲಕ ಕಾರು ಚಲಾಯಿಸಿಕೊಂಡು ಬರುತ್ತಿದ್ದ ವೇಳೆ, ಮನೆಯ ಹೊರಭಾಗದ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.

ಢಿಕ್ಕಿಯ ಪರಿಣಾಮ ಸ್ಕೂಟರ್ ಮನೆಯ ಕಂಪೌಂಡ್‌ಗೆ ತಾಗಿ ಕೆಳಗೆ ಬಿದ್ದಿದ್ದು, ವಾಹನಕ್ಕೆ ಹಾನಿಯಾಗಿದೆ.

ಅಪ್ರಾಪ್ತ ಬಾಲಕ ಕಾರು ಚಲಾಯಿಸಿದ್ದಲ್ಲದೆ, ವಾಹನವನ್ನು ಚಾಲನೆ ಮಾಡಲು ಅವಕಾಶ ನೀಡಿದ ಕಾರಿನ ಮಾಲಕ ಸಲೀಂ ವಿರುದ್ಧವೂ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *