Breaking
19 Jun 2026, Fri

ಯುವವಾಹಿನಿ ಮಾಣಿ ಘಟಕದಿಂದ ಯುವ ವೃಕ್ಷೋತ್ಸವ ನಾಲ್ಕನೇ ಹಂತ: ರುದ್ರಭೂಮಿ ಹಾಗೂ ಅಂಗನವಾಡಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

ಮಾಣಿ: “ಇಂದು ನೆಡುವ ಗಿಡ ನಾಳೆಯ ಪೀಳಿಗೆಗೆ ನೀಡುವ ಅಮೂಲ್ಯ ಉಡುಗೊರೆ” ಎಂಬ ಸಂದೇಶದೊಂದಿಗೆ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಜೂನ್ 18ರಂದು ಯುವ ವೃಕ್ಷೋತ್ಸವದ ನಾಲ್ಕನೇ ಹಂತದ ಕಾರ್ಯಕ್ರಮ ಆಯೋಜಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಕೆದಿಲ ಗ್ರಾಮ ಪಂಚಾಯಿತಿಯ ರುದ್ರಭೂಮಿಯಲ್ಲಿ ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂಕಲ್ಪ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷ ಗಣೇಶ್ ಸಾಯಿ ಕೊಡಾಜೆ, ಅಂತಿಮ ಯಾತ್ರೆಯ ತಾಣವಾಗಿರುವ ರುದ್ರಭೂಮಿಯೂ ಹಸಿರಿನಿಂದ ಕಂಗೊಳಿಸಿದಾಗ ಅದು ಜೀವನದ ನಿರಂತರತೆಯ ಸಂಕೇತವಾಗುತ್ತದೆ ಎಂದು ಹೇಳಿದರು.

ಇದೇ ಕಾರ್ಯಕ್ರಮದ ಮುಂದುವರಿದ ಭಾಗವಾಗಿ ಪಾಟ್ರಕೋಡಿ ಅಂಗನವಾಡಿ ಕೇಂದ್ರದಲ್ಲಿಯೂ ಗಿಡ ನಾಟಿ ನಡೆಸಲಾಯಿತು. ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ವಿವಿಧ ಸ್ಥಳಗಳಲ್ಲಿ ಸಸಿ ನೆಡುವ ಕಾರ್ಯ ಕೈಗೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಯುವವಾಹಿನಿ ಘಟಕದ ಅಧ್ಯಕ್ಷ ಗಣೇಶ್ ಸಾಯಿ ಕೊಡಾಜೆ, ಕೋಶಾಧಿಕಾರಿ ತ್ರಿವೇಣಿ ರಮೇಶ್, ವ್ಯಕ್ತಿತ್ವ ವಿಕಸನ ನಿರ್ದೇಶಕ ಸತೀಶ್ ಪೂಜಾರಿ, ಸಂಘಟನಾ ಕಾರ್ಯದರ್ಶಿ ಬಾಲಕೃಷ್ಣ ಕೆರೆಕೋಡಿ, ನಿತೀನ್ ಅಂಗರಾಜೆ, ಯಶೋಧ ಪೆರ್ನೆ, ಕೆದಿಲ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿಗಳು, ಅಂಗನವಾಡಿ ಕೇಂದ್ರದ ಶಿಕ್ಷಕಿ ಮತ್ತು ಸಹಾಯಕಿಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *