Breaking
19 Jun 2026, Fri

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿ ಬಂಧನ

ಮಲ್ಪೆ: ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಲ್ಪೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬಿಡಗನಹಳ್ಳಿ ಗ್ರಾಮದ ಮಧು ಯಾನೆ ಉಮೇಶ್ ಎಂದು ಗುರುತಿಸಲಾಗಿದೆ.

ಅಂಬಲಪಾಡಿ ಕಪ್ಪೆಟ್ಟು ಸಮೀಪದ ದೇವಸ್ಥಾನದ ಹುಂಡಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ವಾರಂಟ್ ಜಾರಿಯಾಗಿತ್ತು.

ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಅನಿಲ್ ಕುಮಾರ್ ನೇತೃತ್ವದಲ್ಲಿ ವಾರಂಟ್ ಸಿಬ್ಬಂದಿಗಳಾದ ವಿಶ್ವನಾಥ್ ಹೆಚ್. ಹಾಗೂ ಮಹಮ್ಮದ್ ರಫಿ ಅವರ ತಂಡ ಜೂನ್ 18ರಂದು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಸಮೀಪ ಆರೋಪಿಯನ್ನು ಬಂಧಿಸಿ ಠಾಣೆಗೆ ಕರೆತಂದಿದೆ.

ನಂತರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಜೂನ್ 29ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಹಿರಿಯಡ್ಕ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಿದೆ.

Leave a Reply

Your email address will not be published. Required fields are marked *