ಕಾರ್ಕಳ: ಖಾಸಗಿ ಬಸ್ ಹಾಗೂ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಜೋಡುಕಟ್ಟೆಯಲ್ಲಿ ಶುಕ್ರವಾರ (ಜೂ.19) ಬೆಳಿಗ್ಗೆ ನಡೆದಿದೆ.
ಮಾಹಿತಿಯ ಪ್ರಕಾರ, ಬಜಗೋಳಿಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ಎದುರು ದಿಕ್ಕಿನಲ್ಲಿ ಸಂಚರಿಸುತ್ತಿದ್ದ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದ ಪರಿಣಾಮ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್‌ನ ಮುಂಭಾಗಕ್ಕೂ ಹಾನಿಯಾಗಿದೆ.

ಅಪಘಾತದಲ್ಲಿ ಗಾಯಗೊಂಡ ರಿಕ್ಷಾ ಚಾಲಕ ಚಂದ್ರಕಾಂತ್ ಶೆಣೈ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳೀಯರ ಆರೋಪದಂತೆ, ರಸ್ತೆ ತಿರುವಿನ ಅವೈಜ್ಞಾನಿಕ ವಿನ್ಯಾಸವೇ ಅಪಘಾತಕ್ಕೆ ಕಾರಣವಾಗಿರಬಹುದು ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.







