ಬಂಟ್ವಾಳ: ಕರ್ನಾಟಕದಲ್ಲಿ ವಿದ್ಯುತ್ ಸರಬರಾಜು ಕಂಪನಿಗಳನ್ನು ಹಂತ ಹಂತವಾಗಿ ಖಾಸಗೀಕರಣಗೊಳಿಸುವ ರಾಜ್ಯ ಸರ್ಕಾರದ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಬಂಟ್ವಾಳ ತಾಲೂಕು ಪಂಚಾಯತ್ನ ಮಾಜಿ ಸದಸ್ಯ ಪ್ರಭಾಕರ ಪ್ರಭು ಅವರು ಕರ್ನಾಟಕ ವಿದ್ಯುಚ್ಚಕ್ತಿ ನಿಯಂತ್ರಣ ಆಯೋಗಕ್ಕೆ ಮನವಿ ಸಲ್ಲಿಸಿ, ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಖಾಸಗಿ ಕಂಪನಿಗಳಿಗೆ ಒಪ್ಪಿಸುವುದನ್ನು ವಿರೋಧಿಸಿದ್ದಾರೆ.

ರಾಜ್ಯದಲ್ಲಿ ವಿದ್ಯುತ್ ವಿತರಣೆಗೆ ಸಂಬಂಧಿಸಿದಂತೆ ಖಾಸಗಿ ಕಂಪನಿಗಳಿಂದ ಅರ್ಜಿಗಳನ್ನು ಆಹ್ವಾನಿಸಿರುವ ಹಿನ್ನೆಲೆಯಲ್ಲಿ ಸೇರಿದಂತೆ ಖಾಸಗಿ ಸಂಸ್ಥೆಗಳು ಅರ್ಜಿ ಸಲ್ಲಿಸಿರುವುದಾಗಿ ತಿಳಿದುಬಂದಿದೆ. ಈ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಪ್ರಭಾಕರ ಪ್ರಭು, ವಿದ್ಯುತ್, ಕುಡಿಯುವ ನೀರು, ಆರೋಗ್ಯ ಮತ್ತು ರಸ್ತೆ ನಿರ್ಮಾಣದಂತಹ ಸಾರ್ವಜನಿಕ ಸೇವಾ ಕ್ಷೇತ್ರಗಳು ಸರ್ಕಾರದ ಅಧೀನದಲ್ಲಿಯೇ ಇರಬೇಕು ಎಂದು ಒತ್ತಾಯಿಸಿದರು.\

ಖಾಸಗೀಕರಣ ಜಾರಿಯಾದರೆ ಸರ್ಕಾರದ ಗೃಹಜ್ಯೋತಿ, ಬೆಳಕು ಯೋಜನೆಗಳು ಹಾಗೂ ರೈತರ ಕೃಷಿ ಪಂಪ್ಸೆಟ್ಗಳಿಗೆ ನೀಡಲಾಗುತ್ತಿರುವ ಉಚಿತ ವಿದ್ಯುತ್ ಪೂರೈಕೆಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದರು. ಜೊತೆಗೆ ಸಣ್ಣ ಪ್ರಮಾಣದ ವಿದ್ಯುತ್ ಗುತ್ತಿಗೆದಾರರ ಬದುಕಿಗೂ ಸಂಕಷ್ಟ ಎದುರಾಗಬಹುದು ಎಂದು ಅಭಿಪ್ರಾಯಪಟ್ಟರು.

ಟಾಟಾ ಪವರ್ ಸೇರಿದಂತೆ ಯಾವುದೇ ಖಾಸಗಿ ಕಂಪನಿಗಳು ಸಲ್ಲಿಸಿರುವ ಅರ್ಜಿಗಳನ್ನು ತಿರಸ್ಕರಿಸಿ, ಪ್ರಸ್ತುತ ಇರುವ ವಿದ್ಯುತ್ ವಿತರಣಾ ವ್ಯವಸ್ಥೆಯನ್ನೇ ಮುಂದುವರಿಸಬೇಕು ಎಂದು ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಪ್ರಭಾಕರ ಪ್ರಭು ಅವರು ವಿದ್ಯುಚ್ಚಕ್ತಿ ನಿಯಂತ್ರಣ ಆಯೋಗದ ಕಾರ್ಯದರ್ಶಿಯವರಲ್ಲಿ ಈ ಮೂಲಕ ಒತ್ತಾಯ ಪಡಿಸುತ್ತೇನೆ.





