Breaking
19 Sep 2026, Sat

ಸಜಿಪ ನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಆಶ್ಲೇಷ ಬಲಿ ಪೂಜೆ

ಸಜಿಪ ನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಆಶ್ಲೇಷ ಬಲಿ ಪೂಜೆ ಹಾಗೂ ಆಶ್ಲೇಷ ಬಲಿ ಹೋಮ ಭಕ್ತಿಭಾವದಿಂದ ನೆರವೇರಿತು.

ಸಜೀಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ಜರುಗಿದವು. ಕಾರ್ಯಕ್ರಮದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಅರ್ಚಕರಾದ ಗಣಪತಿ ಮಹಾಬಲೇಶ್ವರ ಭಟ್, ರಾಮಕೃಷ್ಣ ಭಟ್ ಜಿ., ಸುಧಾಕರ ಕೆ.ಟಿ., ರಾಮ ಬರೆ ಹಾಗೂ ಇತರರು ಉಪಸ್ಥಿತರಿದ್ದರು.

ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆಶ್ಲೇಷ ಬಲಿ ಪೂಜೆ ಹಾಗೂ ಹೋಮದಲ್ಲಿ ಪಾಲ್ಗೊಂಡು ದೇವರ ಆಶೀರ್ವಾದ ಪಡೆದರು.

Leave a Reply

Your email address will not be published. Required fields are marked *