Breaking
20 Jun 2026, Sat

ಮೂಡುಬಿದಿರೆ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

ಮೂಡುಬಿದಿರೆ: ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ.

ಮೃತರನ್ನು ಮರೋಡಿ ನಿವಾಸಿ ಭಾಸ್ಕರ್ ಎಂದು ಗುರುತಿಸಲಾಗಿದೆ. ಜೂನ್ 15ರ ಸೋಮವಾರ ರಾತ್ರಿ ಅಲಿಯೂರು ಸಮೀಪ ಈ ಅಪಘಾತ ಸಂಭವಿಸಿತ್ತು. ಭಾಸ್ಕರ್ ಅವರು ಕೆಲ್ಲಪುತ್ತಿಗೆಯಲ್ಲಿರುವ ತಮ್ಮ ಪತ್ನಿಯ ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಆಕ್ಟಿವಾ ಸ್ಕೂಟರ್‌ಗೆ ಅವರ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಅಪಘಾತದ ತೀವ್ರತೆಗೆ ಭಾಸ್ಕರ್ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜೂನ್ 19ರ ಶುಕ್ರವಾರ ಅವರು ಕೊನೆಯುಸಿರೆಳೆದಿದ್ದಾರೆ.

Leave a Reply

Your email address will not be published. Required fields are marked *