Breaking
19 Sep 2026, Sat

ಮಣಿಪಾಲದಲ್ಲಿ ಕಾರು–ಸ್ಕೂಟರ್ ಡಿಕ್ಕಿ: ಸವಾರ ಗಂಭೀರ ಗಾಯ

ಉಡುಪಿ: ಜಿಲ್ಲೆಯ ಮಣಿಪಾಲದ ಈಶ್ವರ ನಗರದ ಪೆಟ್ರೋಲ್ ಬಂಕ್ ಜಂಕ್ಷನ್ ಸಮೀಪ ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಹೆರ್ಗಾ ಗ್ರಾಮದ ಗರಡಿಯ ನಿವಾಸಿ ಅಭಿಷೇಕ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಕೈ ಮತ್ತು ಕಾಲುಗಳಿಗೂ ಪೆಟ್ಟು ಬಿದ್ದಿದೆ. ಅವರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಕಾರು ಕುಂದಾಪುರದಿಂದ ಬಜಗೋಳಿ ಕಡೆಗೆ ಸಾಗುತ್ತಿದ್ದ ವೇಳೆ, ಪೆಟ್ರೋಲ್ ಬಂಕ್ ಬಳಿ ಸ್ಕೂಟರ್ ಸವಾರ ತಿರುವು ಪಡೆಯಲು ಯತ್ನಿಸಿದಾಗ ಡಿಕ್ಕಿ ಸಂಭವಿಸಿದೆ.

ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *