Breaking
21 Jun 2026, Sun

ಪ್ರಧಾನ ಮಂತ್ರಿ ಭಾರತೀಯ ಜನೌಷದಿ ಕೇಂದ್ರ ಮತ್ತು ಕೃಷಿ ಪತ್ತಿನ ಸಹಕಾರಿ ಸಂಘ ವಾಮದಪದವು ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ವಾಮದಪದವು: ಪ್ರಧಾನ ಮಂತ್ರಿ ಭಾರತೀಯ ಜನೌಷದಿ ಕೇಂದ್ರ ಹಾಗೂ ಕೃಷಿ ಪತ್ತಿನ ಸಹಕಾರಿ ಸಂಘ ವಾಮದಪದವು ಇವರ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಇಂದು ಸಂಘದ ಸಭಾಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಕೃಷಿ ಪತ್ತಿನ ಸಹಕಾರಿ ಸಂಘ ವಾಮದಪದವು ಇದರ ಅಧ್ಯಕ್ಷ ಸಂಜೀವ ಪೂಜಾರಿ ಪಿಲಿಂಗಾಲು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಜನೌಷದಿ ಕೇಂದ್ರ ವಾಮದಪದವು ಇದರ ಮಾಲೀಕ ಮನೋಜ್ ಕುಲಾಲ್ ಬಸಬೈಲು ಭಾಗವಹಿಸಿ, ಯೋಗದ ಮಹತ್ವ ಹಾಗೂ ದಿನನಿತ್ಯದ ಜೀವನದಲ್ಲಿ ಅದರ ಅಗತ್ಯತೆಯ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಹಕಾರಿ ಸಂಘದ ಪ್ರಧಾನ ಕಾರ್ಯ ನಿರ್ವಹಣಾಧಿಕಾರಿ ಆಲ್ಬರ್ಟ್ ಡಿ ಸೋಜಾ, ಯೋಗ ಶಿಕ್ಷಕ ನರಸಿಂಹ ಹೆಗ್ಡೆ, ಸಹ ಶಿಕ್ಷಕರಾದ ಅಕ್ಷಯ್ ಹಾಗೂ ದಿವಾಕರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಸುಮಾರು 50ಕ್ಕೂ ಹೆಚ್ಚು ಮಂದಿ ಏಕಕಾಲದಲ್ಲಿ ಯೋಗಾಭ್ಯಾಸ ನಡೆಸುವ ಮೂಲಕ ಅಂತರಾಷ್ಟ್ರೀಯ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು. ಯೋಗದ ಮೂಲಕ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಸಂದೇಶವನ್ನು ಕಾರ್ಯಕ್ರಮ ಸಾರಿತು.

Leave a Reply

Your email address will not be published. Required fields are marked *