Breaking
23 Sep 2026, Wed

ಕಣಿಯೂರು ಬಿಜೆಪಿ ಯುವ ಮೋರ್ಚಾ ವತಿಯಿಂದ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ರೈತ ಸಭಾಭವನದಲ್ಲಿ ವಿಶ್ವ ಯೋಗ ದಿನ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ

ಕಣಿಯೂರು: ಬಿಜೆಪಿ ಯುವ ಮೋರ್ಚಾ ಕಣಿಯೂರು ಮಹಾಶಕ್ತಿ ಕೇಂದ್ರದ ವತಿಯಿಂದ ಜೂನ್ 21ರಂದು ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ರೈತ ಸಭಾಭವನದಲ್ಲಿ ವಿಶ್ವ ಯೋಗ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಮುಖಂಡರು, ಪ್ರಧಾನಿ ನರೇಂದ್ರ ಮೋದಿ ಅವರ ಇಚ್ಛಾಶಕ್ತಿ ಮತ್ತು ಪ್ರಯತ್ನದ ಫಲವಾಗಿ ಯೋಗ ಇಂದು ವಿಶ್ವವ್ಯಾಪಿಯಾಗಿದ್ದು, ಜಗತ್ತಿನಾದ್ಯಂತ ಯೋಗದ ಮಹತ್ವ ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟರು.

ಯೋಗವು ಕೇವಲ ದೈಹಿಕ ಆರೋಗ್ಯಕ್ಕಷ್ಟೇ ಸೀಮಿತವಾಗದೆ ಮಾನಸಿಕ ಆರೋಗ್ಯ ಮತ್ತು ಆತ್ಮಶಾಂತಿಗೂ ಅತ್ಯಂತ ಅಗತ್ಯವಾಗಿದ್ದು, ಭಾರತೀಯ ಸಂಸ್ಕೃತಿ ಮತ್ತು ಹಿಂದೂ ಪರಂಪರೆಯ ಶ್ರೇಷ್ಠ ಪರಂಪರೆಯಾದ ಯೋಗವನ್ನು ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಕಣಿಯೂರು ಗ್ರಾಮದ ಮುಗೆರೋಡಿ ನಿವಾಸಿಗಳಾದ ಶ್ರೀಮತಿ ಮಂಜುಳಾ ಮತ್ತು ಪುರುಷೋತ್ತಮ ಗೌಡ ಅವರ ಪುತ್ರಿ ಕು. ಅದಿತಿ, ಯೋಗಾಸನ ಕ್ಷೇತ್ರದಲ್ಲಿ 2024ರಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜಯಪ್ರಸಾದ್ ಗೌಡ ಕಡಮ್ಮಾಜೆ, ಉಪಾಧ್ಯಕ್ಷ ಪ್ರಕಾಶ್ ಬಾರ್ಯ, ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ. ಬಂದಾರು, ಯುವ ವಕೀಲ ಹಾಗೂ ಪಕ್ಷದ ಪ್ರಮುಖ ಯತೀಶ್ ಶೆಟ್ಟಿ ಪಣೆಕ್ಕರ, ಕಣಿಯೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಬಾಲಕೃಷ್ಣ ಗೌಡ ಮುಗೇರಡ್ಕ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೆಂ.ಕ್ಯಾರ್, ಪದ್ಮುಂಜ ಸಿ.ಎ. ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷ ಅಶೋಕ್ ಗೌಡ ಪಾಂಜಾಳ, ನಿರ್ದೇಶಕ ಹಾಗೂ ಯುವ ವಕೀಲ ಉದಯ್ ಕುಮಾರ್ ಬಿ.ಕೆ., ಕಣಿಯೂರು ಪಂಚಾಯತ್ ಮಾಜಿ ಅಧ್ಯಕ್ಷ ಸೀತಾರಾಮ ಮಡಿವಾಳ, ಮಹಾಬಲ ಗೌಡ ಬಂದಾರು, ವಿಠ್ಠಲ್ ಶೆಟ್ಟಿ ಕೊಲ್ಲೊಟ್ಟು ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *