Breaking
22 Jun 2026, Mon

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬೆಳಾಲು: ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜು.20 ರಂದು ಆಚರಿಸಲಾಯಿತು.

ಶ್ರೀ ಧ.ಮಂ.ಪ್ರಕೃತಿ ಮತ್ತು ಯೋಗ ವಿಜ್ಞಾನ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ಸುಜಾತ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಷ್ಟಾಂಗ ಯೋಗದ ಬಗ್ಗೆ ಮಾಹಿತಿ ನೀಡಿ, ಯೋಗ ಜೀವನದ ಅಂಗವಾಗಬೇಕೆಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿಗಳಿಂದ ಯೋಗ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಜರಗಿತು.

Leave a Reply

Your email address will not be published. Required fields are marked *