Breaking
22 Jun 2026, Mon

ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆ ಬೆಳಾಲು: ವಿದ್ಯಾರ್ಥಿ ಸಂಸತ್ ಉದ್ಘಾಟನೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆ, ಬೆಳಾಲುವಿನಲ್ಲಿ ವಿದ್ಯಾರ್ಥಿ ಸಂಸತ್ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಶಾಲೆಯ ಮುಖ್ಯೋಪಾಧ್ಯಾಯ ಹಾಗೂ ಗೌರವ ರಾಜ್ಯಪಾಲ ಜಯರಾಮ ಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರಮಾಣ ವಚನ ಬೋಧಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಮೌಲ್ಯಗಳು, ಆಡಳಿತ ವ್ಯವಸ್ಥೆ ಹಾಗೂ ನಾಯಕತ್ವ ಗುಣಗಳನ್ನು ವಿದ್ಯಾರ್ಥಿಗಳು ಅರಿತುಕೊಳ್ಳಲು ವಿದ್ಯಾರ್ಥಿ ಸರ್ಕಾರವು ಉತ್ತಮ ವೇದಿಕೆಯಾಗಿದ್ದು, ಜವಾಬ್ದಾರಿಯುತ ನಾಗರಿಕರಾಗಿ ಬೆಳೆಯಲು ಇದು ಸಹಕಾರಿಯಾಗಲಿದೆ ಎಂದು ಹೇಳಿದರು.

ವಿದ್ಯಾರ್ಥಿ ನಾಯಕ ಕಾರ್ತಿಕ್ ಎಂ.ಎನ್. ಅವರು ವಿದ್ಯಾರ್ಥಿ ಸಂಸತ್ತಿನ ವಾರ್ಷಿಕ ಯೋಜನೆಯನ್ನು ಮಂಡಿಸಿದರು.

ಕಾರ್ಯಕ್ರಮವನ್ನು ಶಿಕ್ಷಕ ಕಿರಣ್ ಸಂಘಟಿಸಿದ್ದರು. ಉಪನಾಯಕ ರಕ್ಷಿತ್ ಸ್ವಾಗತಿಸಿದರು. ವಿರೋಧ ಪಕ್ಷದ ನಾಯಕಿ ನೇತ್ರಾವತಿ ವಂದನಾರ್ಪಣೆ ಮಾಡಿದರು. ಕಾರ್ಯದರ್ಶಿ ಮಹಮ್ಮದ್ ಹಯನ್ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *