Breaking
23 Sep 2026, Wed

ಎಕ್ಕೂರು ರೈಲ್ವೆ ಮೇಲ್ಸೇತುವೆಯಲ್ಲಿ ಲಾರಿಗೆ ಬೈಕ್ ಡಿಕ್ಕಿ: ಯುವಕ ಮೃತ್ಯು

ಮಂಗಳೂರು: ಮಂಗಳೂರಿನ ಎಕ್ಕೂರು ರಾಷ್ಟ್ರೀಯ ಹೆದ್ದಾರಿ 66ರ ರೈಲ್ವೆ ಮೇಲ್ಸೇತುವೆಯಲ್ಲಿ ಚಲಿಸುತ್ತಿದ್ದ ಲಾರಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟ ಘಟನೆ ಜೂನ್ 21ರಂದು ನಡೆದಿದೆ.

ಮೃತ ಯುವಕನನ್ನು ಕಾಸರಗೋಡು ಜಿಲ್ಲೆಯ ಮಂಜೇಶ್ವರ ಸಮೀಪದ ಪಾತೂರು ನಿವಾಸಿ ಸುಧೀಶ್ ಸಿ.ಕೆ. (26) ಎಂದು ಗುರುತಿಸಲಾಗಿದೆ. ಅವರು ಎಸಿ ಮೆಕ್ಯಾನಿಕ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಭಾನುವಾರ ಬೆಳಿಗ್ಗೆ ಕೆಲಸದ ನಿಮಿತ್ತ ನಗರಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಎಕ್ಕೂರು ರೈಲ್ವೆ ಮೇಲ್ಸೇತುವೆಯಲ್ಲಿ ಸುಧೀಶ್ ಚಲಾಯಿಸುತ್ತಿದ್ದ ಬೈಕ್, ಮುಂದೆ ಸಾಗುತ್ತಿದ್ದ ಲಾರಿಯ ಹಿಂಭಾಗಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಅಪಘಾತದ ಪರಿಣಾಮ ಸುಧೀಶ್ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ ತೀವ್ರ ರಕ್ತಸ್ರಾವದಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅತಿವೇಗವೇ ಅಪಘಾತಕ್ಕೆ ಪ್ರಮುಖ ಕಾರಣವಾಗಿರಬಹುದು ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *