Breaking
22 Jun 2026, Mon

ವಿವಿಧ ಸಂಘಗಳ ಉದ್ಘಾಟನೆ ಹಾಗೂ ವಿದ್ಯಾರ್ಥಿ ಅಭಿನಂದನಾ ಕಾರ್ಯಕ್ರಮ

ಬೆಳಾಲು: ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಹಾಗೂ 2025-26ನೇ ಸಾಲಿನ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಶ್ರೀ ಧ. ಮಂ. ಶಿಕ್ಷಣ ಸಂಸ್ಥೆಗಳ ಕ್ಷೇಮಪಾಲನ ಅಧಿಕಾರಿಗಳಾದ ಧನ್ಯಕುಮಾರ್ ಉದ್ಘಾಟಿಸಿ, ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳ ಪ್ರತಿಭೆಗಳನ್ನು ಅನಾವರಣಗೊಳಿಸಲು ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಂಘ ಚಟುವಟಿಕೆಗಳು ಉತ್ತಮ ವೇದಿಕೆಯಾಗಿವೆ ಎಂದು ಹೇಳಿದರು. ಉತ್ತಮ ಫಲಿತಾಂಶ ಸಾಧಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಶುಭ ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಮಾತನಾಡಿ, ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳು ಉತ್ತಮ ಅನುಭವ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಉತ್ತಮ ಫಲಿತಾಂಶ ನೀಡಿದ ವಿದ್ಯಾರ್ಥಿಗಳು ಹಾಗೂ ಶ್ರಮಿಸಿದ ಶಿಕ್ಷಕರನ್ನು ಅಭಿನಂದಿಸಿದರು.

2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 612 ಅಂಕಗಳನ್ನು ಪಡೆದ ರಕ್ಷಾ ಎನ್ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ರಾಜೇಶ್ ಕುರ್ಕಿಲ್ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಶಿಕ್ಷಕಿ ಕೋಕಿಲ ಸ್ವಾಗತಿಸಿದರು. ಐಶ್ವರ್ಯ ವಂದಿಸಿದರು. ಸುಮನ್ ಯು.ಎಸ್. ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *