Breaking
23 Jun 2026, Tue

ಪರಿಶುದ್ಧವಾದ ಮಾತುಗಳಿಂದ ನಾಯಕತ್ವ ಬೆಳೆಯಲು ಸಾಧ್ಯ: ಪ್ರಭಾಕರ ಪ್ರಭು

ಬಂಟ್ವಾಳ: ಪ್ರತಿಯೊಬ್ಬ ವ್ಯಕ್ತಿ ತನಗೆ ಸಿಕ್ಕಿದ ಅವಕಾಶವನ್ನು ಜವಾಬ್ದಾರಿ ಹಾಗೂ ಪ್ರಾಮಾಣಿಕತೆಯಿಂದ ನಿರ್ವಹಿಸಿ, ಪರಿಶುದ್ಧವಾದ ಮಾತುಗಳ ಮೂಲಕ ಸಮಾಜದೊಂದಿಗೆ ಬೆರೆತಾಗ ನಾಯಕತ್ವದ ಗುಣಗಳನ್ನು ಬೆಳೆಸಲು ಸಾಧ್ಯ ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಪ್ರಭಾಕರ ಪ್ರಭು ಹೇಳಿದರು.

ಅವರು ಇತ್ತೀಚೆಗೆ ಸರಕಾರಿ ಪದವಿ ಪೂರ್ವ ಕಾಲೇಜು, ಸಿದ್ಧಕಟ್ಟೆಯಲ್ಲಿ ನಡೆದ 2026–27ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕುಂಭಶ್ರೀ ಪದವಿ ಪೂರ್ವ ಕಾಲೇಜು, ವೇಣೂರಿನ ಪ್ರಾಂಶುಪಾಲ ಶ್ರೀನಿವಾಸ ನಾಯ್ಕ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಶ್ರಮಪಟ್ಟು ಸಿಕ್ಕಿದ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು. ಜೊತೆಗೆ ಸಮಾಜದಲ್ಲಿ ಗೌರವಯುತ ವ್ಯಕ್ತಿಗಳಾಗಿ ಬೆಳೆದು ವಿದ್ಯಾರ್ಥಿ ಜೀವನದಲ್ಲೇ ನಾಯಕತ್ವ ಗುಣಗಳನ್ನು ರೂಢಿಸಿಕೊಳ್ಳಬೇಕು ಎಂದು ಶುಭ ಹಾರೈಸಿದರು.

ಸಂಸ್ಥೆಯ ಪ್ರಾಂಶುಪಾಲ ಉದಯಕುಮಾರ್ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ಅರ್ಥಶಾಸ್ತ್ರ ಉಪನ್ಯಾಸಕ ಭಾಸ್ಕರ ಎಂ ಸ್ವಾಗತಿಸಿದರು. ವ್ಯವಹಾರ ಅಧ್ಯಯನ ಉಪನ್ಯಾಸಕಿ ರೇಖಾ ಬಾಳಿಗಾ ಅತಿಥಿಗಳನ್ನು ಪರಿಚಯಿಸಿದರು. ಉಪನ್ಯಾಸಕ ಸಂಜಯ್ ಬಿ.ಎಸ್ ಕಾರ್ಯಕ್ರಮ ನಿರೂಪಿಸಿ, ಧನ್ಯವಾದ ಸಲ್ಲಿಸಿದರು.

Leave a Reply

Your email address will not be published. Required fields are marked *