Breaking
25 Sep 2026, Fri

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ – ಕುಟುಂಬ ಅಪಾಯದಿಂದ ಪಾರು

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಸುಟ್ಟುಹೋದ ಘಟನೆ ಮೂಡುಬಿದಿರೆ ಪೇಟೆಯಲ್ಲಿ ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಸಮಯಪ್ರಜ್ಞೆಯಿಂದ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಾಹಿತಿಯ ಪ್ರಕಾರ, ಕೋಟೆಬಾಗಿಲಿನ ಮಸೂದು ಅವರು ಮೂಡುಮಾರ್ನಾಡಿನ ಅವಿನಾಶ್ ಅವರಿಂದ ಕಾರು ಖರೀದಿಸಿ ಕುಟುಂಬ ಸಮೇತರಾಗಿ ಮೂಡುಬಿದಿರೆಗೆ ಬರುತ್ತಿದ್ದರು. ಪುರಸಭೆಯ ಹಳೆ ಕಟ್ಟಡದ ಸಮೀಪ ತಲುಪುತ್ತಿದ್ದಂತೆ ಕಾರಿನ ಫಾಗ್ ಲೈಟ್ ಭಾಗದಲ್ಲಿ ಹೊಗೆ ಕಾಣಿಸಿಕೊಂಡಿದೆ.

ತಕ್ಷಣ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಹಾಗೂ ಮಹಿಳೆಯರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು. ಕೆಲವೇ ಕ್ಷಣಗಳಲ್ಲಿ ಬೆಂಕಿ ತೀವ್ರವಾಗಿ ಹಬ್ಬಿ ಕಾರು ಹೊತ್ತಿ ಉರಿಯಲು ಆರಂಭಿಸಿತು.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿಯನ್ನು ನಂದಿಸಿದರು. ಬಳಿಕ ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Leave a Reply

Your email address will not be published. Required fields are marked *