Breaking
23 Sep 2026, Wed

ಲಕ್ನೋ ಅಗ್ನಿ ಅವಘಡಕ್ಕೆ ಪ್ರಧಾನಿ ಮೋದಿ ಸಂತಾಪ; ಮೃತರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ ಘೋಷಣೆ

ಲಕ್ನೋ: ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಲಕ್ನೋದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡಕ್ಕೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಲಕ್ನೋದ ಅಲಿಗಂಜ್ ಪ್ರದೇಶದಲ್ಲಿರುವ ಕೋಚಿಂಗ್ ಸೆಂಟರ್ ಕಾರ್ಯನಿರ್ವಹಿಸುತ್ತಿದ್ದ ಮೂರು ಅಂತಸ್ತಿನ ಕಟ್ಟಡದಲ್ಲಿ ಸೋಮವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಬೆಂಕಿ ಕ್ಷಣಾರ್ಧದಲ್ಲಿ ಕಟ್ಟಡದ ಹಲವು ಭಾಗಗಳಿಗೆ ವ್ಯಾಪಿಸಿದ್ದರಿಂದ ವಿದ್ಯಾರ್ಥಿಗಳು ಸೇರಿದಂತೆ ಹಲವರು ಒಳಗೆ ಸಿಲುಕಿಕೊಂಡಿದ್ದರು. ಪ್ರಾಣ ರಕ್ಷಿಸಿಕೊಳ್ಳಲು ಕೆಲ ವಿದ್ಯಾರ್ಥಿಗಳು ಮೊದಲ ಮಹಡಿಯಿಂದ ಕೆಳಕ್ಕೆ ಜಿಗಿದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಾಹಿತಿ ತಿಳಿದ ತಕ್ಷಣ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಹಲವು ಗಂಟೆಗಳ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.

Leave a Reply

Your email address will not be published. Required fields are marked *