Breaking
9 Aug 2026, Sun

ಪಲ್ಟಿಯಾಗಿ ಡಿವೈಡರ್ ಮೇಲೇರಿದ ಕಾರು; ಕಾರಿನಲ್ಲಿದ್ದವರು ಅಪಾಯದಿಂದ ಪಾರು

ಕಾಪು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾಗಿ ರಸ್ತೆ ವಿಭಾಜಕದ ಮೇಲೆ ನಿಂತ ಘಟನೆ ಮಂಗಳವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಪೆಟ್ರೋಲ್ ಬಂಕ್ ಸಮೀಪ ಸಂಭವಿಸಿದೆ.


ಮಂಗಳೂರಿನಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಕಾರು ಏಕಾಏಕಿ ನಿಯಂತ್ರಣ ತಪ್ಪಿ ರಸ್ತೆ ಮಧ್ಯದಲ್ಲಿ ಪಲ್ಟಿ ಹೊಡೆಯುತ್ತಾ ವಿಭಾಜಕದ ಮೇಲೆ ಏರಿದೆ. ಅಪಘಾತ ಸಂಭವಿಸಿದ ವೇಳೆ ಹೆದ್ದಾರಿಯಲ್ಲಿ ಇತರೆ ವಾಹನಗಳು ಇಲ್ಲದ ಕಾರಣ ಸಂಭವಿಸಬಹುದಾದ ದೊಡ್ಡ ಅನಾಹುತ ತಪ್ಪಿದೆ.


ಅಪಘಾತದ ಪರಿಣಾಮ ಕಾರು ಜಖಂಗೊಂಡಿದ್ದು, ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ತಕ್ಷಣ ಗಾಯಾಳುಗಳಿಗೆ ನೆರವು ನೀಡಿ ಪ್ರಾಥಮಿಕ ಚಿಕಿತ್ಸೆ ಒದಗಿಸಿದರು.


ಘಟನೆ ಕುರಿತು ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *