Breaking
24 Jun 2026, Wed

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಎಸ್. ಸಿ ಮೋರ್ಚಾದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಕಲ್ಲಡ್ಕ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಎಸ್.ಸಿ ಮೋರ್ಚಾ ವತಿಯಿಂದ ಮಾಣಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಅನಂತಾಡಿ ಶಕ್ತಿ ಕೇಂದ್ರದ ಶ್ರೀ ದೇವಿ ಮಂದಿರ, ದೇವಿನಗರ ವಠಾರದಲ್ಲಿ ಇತ್ತೀಚೆಗೆ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.


ಪಕ್ಷದ “ಸೇವಾ ಈ ಪಾಕ್ಷಿಕ” ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ಈ ಸ್ವಚ್ಛತಾ ಅಭಿಯಾನದಲ್ಲಿ ಪರಿಸರ ಸ್ವಚ್ಛತೆ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್, ಎಸ್.ಸಿ ಮೋರ್ಚಾದ ಸಾಮಾಜಿಕ ಕಾರ್ಯ ಶ್ಲಾಘನೀಯವಾಗಿದ್ದು, ಇಂತಹ ಕಾರ್ಯಕ್ರಮಗಳು ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತವೆ ಎಂದು ಹೇಳಿದರು.


ಬಂಟ್ವಾಳ ಮಂಡಲ ಬಿಜೆಪಿ ಎಸ್.ಸಿ ಮೋರ್ಚಾದ ಅಧ್ಯಕ್ಷ ರಮೇಶ್ ಕುದ್ರೆಬೆಟ್ಟು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಮಾಣಿ ಮಹಾಶಕ್ತಿ ಕೇಂದ್ರದ ಪ್ರಮುಖರು ಹಾಗೂ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ಮಂಡಲ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್ ವಹಿಸಿದ್ದರು.
ವೇದಿಕೆಯಲ್ಲಿ ಬಂಟ್ವಾಳ ಮಂಡಲ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಮಂಡಲ ಕಾರ್ಯದರ್ಶಿ ಸನತ್ ಕುಮಾರ್ ರೈ, ಮಾಣಿ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ನಾಗೇಶ್ ಭಂಡಾರಿ ಹಾಗೂ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗೋಪಾಲ ಕಾರಗುಡ್ಡೆ ಉಪಸ್ಥಿತರಿದ್ದರು.


ಜಿಲ್ಲಾ ಬಿಜೆಪಿ ಕಾರ್ಯದರ್ಶಿ ದಿನೇಶ್ ಅಮ್ಟೂರು ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು, ಸ್ಥಳೀಯ ಪ್ರಮುಖರು ಮತ್ತು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ನಾಗೇಶ್ ಭಂಡಾರಿ ಸ್ವಾಗತಿಸಿ, ಗೋಪಾಲ ಕಾರಗುಡ್ಡೆ ವಂದಿಸಿದರು.

Leave a Reply

Your email address will not be published. Required fields are marked *