Breaking
24 Jun 2026, Wed

ಕಾಸರಗೋಡು: ಎರಡು ಪ್ರತ್ಯೇಕ ಹೆದ್ದಾರಿ ಅಪಘಾತಗಳು: ಮೂವರು ದುರ್ಮರಣ

ಕಾಸರಗೋಡು: ಕುಂಬಳೆಯ ಶಿರಿಯಾ ಹಾಗೂ ಕಾಸರಗೋಡು ಪಟ್ಟಣದ ಹೊರವಲಯದ ನಾಯಮ್ಮಾರ್ ಮೂಲೆಯಲ್ಲಿ ಸೋಮವಾರ ಸಂಜೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ಮೃತಪಟ್ಟಿದ್ದಾರೆ.


ಮೊದಲ ಘಟನೆಯಲ್ಲಿ, ಕುಂಬಳೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯ ಶಿರಿಯಾ ಬಳಿ ಸ್ಕೂಟರ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಇಬ್ಬರು ಯುವಕರು ಮೃತಪಟ್ಟಿದ್ದಾರೆ.
ಮೃತರನ್ನು ಉದುಮ ಪಕ್ಕಾಯರ ನಿವಾಸಿಗಳಾದ ಪ್ರಜೀಶ್ (25) ಮತ್ತು ಅಮೀನ್ (25) ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಇಬ್ಬರೂ ಮಂಗಳೂರಿನಿಂದ ಕಾಸರಗೋಡು ಕಡೆಗೆ ಸ್ಕೂಟರ್ನಲ್ಲಿ ಪ್ರಯಾಣಿಸುತ್ತಿದ್ದಾಗ ವಾಹನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ.


ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ತುರ್ತುವಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರಜೀಶ್ ಮೃತಪಟ್ಟಿದ್ದು, ತೀವ್ರ ಗಾಯಗೊಂಡಿದ್ದ ಅಮೀನ್ ಕೂಡ ಸೋಮವಾರ ರಾತ್ರಿ ಚಿಕಿತ್ಸೆ ಫಲಿಸದೆ ನಿಧನರಾದರು.
ಇಬ್ಬರೂ ಆಪ್ತ ಸ್ನೇಹಿತರಾಗಿದ್ದು, ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.


ಇನ್ನೊಂದು ಘಟನೆಯಲ್ಲಿ, ಕಾಸರಗೋಡು ಪಟ್ಟಣದ ಹೊರವಲಯದ ನಾಯಮ್ಮಾರ್ ಮೂಲೆಯಲ್ಲಿ ಲಾರಿ ಹಾಗೂ ಮೋಟಾರ್ ಸೈಕಲ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ.
ಮೃತರನ್ನು ಆಲಂಪಾಡಿಯ ರಫೀಕ್ (45) ಎಂದು ಗುರುತಿಸಲಾಗಿದೆ. ಚೆರ್ಕಳ ಕಡೆಗೆ ತೆರಳುತ್ತಿದ್ದ ಲಾರಿ, ರಫೀಕ್ ಸವಾರಿ ಮಾಡುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ವಿದ್ಯಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *