Breaking
14 May 2026, Thu

ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ನಿಧನ: ಸಂತಾಪ ಸೂಚಿಸಿದ ಮಾಜಿ ಸಚಿವ ರಮಾನಾಥ ರೈ

ಬಂಟ್ವಾಳ: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ನಿಧನ ಹಿನ್ನಲೆ ಮಾಜಿ ಸಚಿವ ರಮಾನಾಥ ರೈ ಸಂತಾಪ ಸೂಚಿಸಿದ್ದಾರೆ.

ಆಧುನಿಕ ಭಾರತದ ಅಭಿವೃದ್ಧಿಯ ನೇತಾರ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ.

ಮೃತರ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಕೋಟ್ಯಂತರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ, ಎಂದು ಮಾಜಿ ಸಚಿವರು ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *