Breaking
24 Jun 2026, Wed

ನಿಲ್ಲಿಸಿದ್ದ ಕಾರು ಚಲಾಯಿಸುವ ವೇಳೆ ಸ್ಕೂಟರ್‌ಗೆ ಢಿಕ್ಕಿ; ಸವಾರ ಗಾಯ

ಕುಂದಾಪುರ: ಇಲ್ಲಿನ ಮುಖ್ಯ ರಸ್ತೆಯಲ್ಲಿ ಕಾರು ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಕೆ. ವೆಂಕಟರಮಣ ಶೆಣೈ ಗಾಯಗೊಂಡ ಘಟನೆ ಜೂನ್ 23ರ ಬೆಳಗ್ಗೆ ನಡೆದಿದೆ.

ರಸ್ತೆ ಬದಿ ನಿಲ್ಲಿಸಿದ್ದ ಕಾರನ್ನು ಚಾಲಕ ವಿಘ್ನೇಶ್ ಯಾವುದೇ ಸೂಚನೆ ನೀಡದೆ ಏಕಾಏಕಿ ಚಲಾಯಿಸಿದ ಪರಿಣಾಮ ಸ್ಕೂಟರ್‌ಗೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಗಾಯಗೊಂಡ ವೆಂಕಟರಮಣ ಶೆಣೈ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸಂಬಂಧ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *