Breaking
25 Sep 2026, Fri

ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಇಬ್ಬರು ಅಪ್ರಾಪ್ತರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಲೈಂಗಿಕ ದೌರ್ಜನ್ಯ ಎಸಗಿ ಜೀವ ಬೆದರಿಕೆ ಒಡ್ಡಿರುವ ಆರೋಪದ ಹಿನ್ನೆಲೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ತಮ್ಮ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಕುರಿತು ಇತ್ತೀಚೆಗೆ ಮಾಹಿತಿ ದೊರೆತ ಹಿನ್ನೆಲೆ ದೂರುದಾರರು ಬಾಲಕಿಯನ್ನು ವಿಚಾರಿಸಿದ ವೇಳೆ, ಸಂಬಂಧಿಕನಾಗಿರುವ ಅಪ್ರಾಪ್ತ ಬಾಲಕ ಹಾಗೂ ಆತನ ಸ್ನೇಹಿತ ಸೇರಿ ದೌರ್ಜನ್ಯ ಎಸಗಿರುವ ಆರೋಪ ಬೆಳಕಿಗೆ ಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.


ದೂರಿನ ಪ್ರಕಾರ, 2023ರಲ್ಲಿ ಬೆಳ್ತಂಗಡಿಯಲ್ಲಿರುವ ಡ್ಯಾಂ ಸಮೀಪದ ಕಟ್ಟಡವೊಂದಕ್ಕೆ ಬಾಲಕಿಯನ್ನು ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಈ ವಿಷಯವನ್ನು ಯಾರಿಗೂ ತಿಳಿಸಿದರೆ ಜೀವ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ.


ಈ ಕುರಿತು ಜೂನ್ 23ರಂದು ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಭಾರತೀಯ ದಂಡ ಸಂಹಿತೆಯ ಸಂಬಂಧಿತ ಕಲಂಗಳು ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *