Breaking
25 Sep 2026, Fri

ಸ್ಕೂಟಿ ಬೆಂಕಿ ಅವಘಡ: ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವು

ಮಡಂತ್ಯಾರು: ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಜೂನ್ 12ರಂದು ಸ್ಕೂಟಿ ಬೆಂಕಿಗಾಹುತಿಯಾದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾನೆ.


ಮೃತ ಬಾಲಕನನ್ನು ದಿಯಾನ್ (7) ಎಂದು ಗುರುತಿಸಲಾಗಿದೆ. ಆತ ಬೆಳಾಲು ನಿವಾಸಿ, ನಿವೃತ್ತ ಮಾಜಿ ಸೈನಿಕ ಮೋಹನ್ ಗೌಡ ಕಾಡಂಡ ಅವರ ಪುತ್ರನಾಗಿದ್ದು, ಉಜಿರೆಯ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿದ್ದ.


ಜೂನ್ 12 ರಂದು ಮೋಹನ್ ಗೌಡ ಅವರು ಪುತ್ರ ದಿಯಾನ್‌ನನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಸ್ಕೂಟಿಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಏಕಾಏಕಿ ಬೆಂಕಿ ಹತ್ತಿಕೊಂಡಿತ್ತು. ಪರಿಣಾಮ ದಿಯಾನ್‌ಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.


ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ದಿಯಾನ್ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಗಾಯಗೊಂಡಿದ್ದ ಮೋಹನ್ ಗೌಡ ಅವರು ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ.
ಮೃತ ದಿಯಾನ್ ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾನೆ.

Leave a Reply

Your email address will not be published. Required fields are marked *