Breaking
25 Jun 2026, Thu

ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿದ ಬಸ್

ಮಣಿಪಾಲ: ಇಲ್ಲಿನ ಸಿಂಡಿಕೇಟ್ ಸರ್ಕಲ್ ಸಮೀಪ ಇಳಿಜಾರಿನಲ್ಲಿ ಖಾಸಗಿ ಶಾಲೆಯ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಏರಿದ ಘಟನೆ ಗುರುವಾರ ಬೆಳಿಗ್ಗೆ (ಜೂನ್ 25) ನಡೆದಿದೆ.

ಅದೃಷ್ಟವಶಾತ್ ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಸ್ಥಳಕ್ಕೆ ಮಣಿಪಾಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಸ್ ಮಣಿಪಾಲ ಕಡೆಯಿಂದ ಉಡುಪಿ ಕಡೆಗೆ ಸಂಚರಿಸುತ್ತಿತ್ತು. ಮಳೆಯ ಕಾರಣ ರಸ್ತೆ ಜಾರುವ ಸ್ಥಿತಿಯಲ್ಲಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿರಬಹುದು ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *