Breaking
25 Jun 2026, Thu

ಮುಲ್ಕಿ: ಗಾಂಜಾ ಮಾರಾಟ ಆರೋಪಿಗೆ ಬಲೆ – 4 ಕೆಜಿ ಮಾದಕ ವಶ

ಮೂಡುಬಿದಿರೆ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಗುರುವಾರ (ಜೂ.25) ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಂಗಳೂರು ಕೋಟೆಕಾರ್ ನಿವಾಸಿ ಅಬ್ಬಾಸ್ (50) ಎಂದು ಗುರುತಿಸಲಾಗಿದೆ. ಆರೋಪಿಯಿಂದ ಸುಮಾರು 4 ಕೆಜಿ ಗಾಂಜಾ ಮಾದಕದ್ರವ್ಯವನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ ಅಂದಾಜು 2 ಲಕ್ಷ ರೂ. ಎಂದು ತಿಳಿದುಬಂದಿದೆ.

ಈ ಸಂಬಂಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 45/2026 ಅಡಿಯಲ್ಲಿ ಕಲಂ 8(ಸಿ), 20(ಬಿ) ಅನ್ವಯ ಪ್ರಕರಣ ದಾಖಲಾಗಿದೆ.

ಪಣಂಬೂರು ಎಸಿಪಿ ತಂಡ ಹಾಗೂ ಮುಲ್ಕಿ ಪೊಲೀಸ್ ಠಾಣೆಯ ಸಿಬ್ಬಂದಿ ಸಂಯುಕ್ತವಾಗಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *