Breaking
26 Jun 2026, Fri

ಮಂಗಳೂರಿನಲ್ಲಿ ಎರಡು ಪ್ರತ್ಯೇಕ ಡ್ರಗ್ಸ್ ಪ್ರಕರಣಗಳು; ಎಂಡಿಎಂಎ ಸಮೇತ ನಾಲ್ವರ ಬಂಧನ

ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕ ದ್ರವ್ಯ ಎಂಡಿಎಂಎ (MDMA) ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದ ಮೇಲೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಬಂಧಿತರನ್ನು ಬೆಂಗಳೂರಿನ ಹಲಸೂರು ಲಿಡೋ ಮಾಲ್ ನಿವಾಸಿ ಮೊಹಮ್ಮದ್ ನದೀಮ್ (27), ಉಳ್ಳಾಲದ ಸೋಮೇಶ್ವರ ಉಚ್ಚಿಲ ನಿವಾಸಿ ಉಮರುಲ್ ಫಾರೂಕ್ (30), ಕೆ.ಸಿ.ರೋಡ್ ಕಿನ್ಯಾ ನಿವಾಸಿ ಇಮ್ತಿಯಾಜ್ ಇಸ್ಮಾಯಿಲ್ ಕಿನ್ಯಾ (41) ಹಾಗೂ ಕುಂಪಲ ಸುರಕ್ಷಾ ನಗರದ ನಿವಾಸಿ ಧನುಷ್ (29) ಎಂದು ಗುರುತಿಸಲಾಗಿದೆ.

ಮೊದಲ ಪ್ರಕರಣದಲ್ಲಿ, ಬೆಂದೂರಿನ ಲಾಡ್ಜ್ ಒಂದರಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡಲು ಎಂಡಿಎಂಎ ಸಂಗ್ರಹಿಸಿಟ್ಟಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದರು. ಈ ವೇಳೆ ಮೊಹಮ್ಮದ್ ನದೀಮ್, ಉಮರುಲ್ ಫಾರೂಕ್ ಮತ್ತು ಇಮ್ತಿಯಾಜ್ ಇಸ್ಮಾಯಿಲ್ ಕಿನ್ಯಾ ಅವರನ್ನು ಬಂಧಿಸಿ, ಅವರಿಂದ 35.53 ಗ್ರಾಂ ಎಂಡಿಎಂಎ ಹಾಗೂ ₹7,030 ನಗದನ್ನು ವಶಪಡಿಸಿಕೊಂಡರು.

ಬಂಧಿತರು ಹಾಗೂ ವಶಪಡಿಸಿಕೊಂಡ ಮಾದಕ ದ್ರವ್ಯವನ್ನು ಕದ್ರಿ ಪೊಲೀಸರಿಗೆ ಹಸ್ತಾಂತರಿಸಲಾಗಿದ್ದು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇನ್ನೊಂದು ಪ್ರಕರಣದಲ್ಲಿ, ಬೊಲ್ಲಾರಿನ ಮುಳಿಹಿತ್ಲು ಪ್ರದೇಶದಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಧನುಷ್ ಎಂಬಾತನನ್ನು ಪಾಂಡೇಶ್ವರ ಪೊಲೀಸರು ಖಚಿತ ಮಾಹಿತಿ ಮೇರೆಗೆ ಬಂಧಿಸಿದ್ದಾರೆ. ಆತನಿಂದ 2.32 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದ್ದು, ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

Leave a Reply

Your email address will not be published. Required fields are marked *