Breaking
26 Jun 2026, Fri

ಬಿ.ಸಿ.ರೋಡು: ಕಾಲುದಾರಿ ಒಳಚರಂಡಿ ಕಾಂಕ್ರೀಟ್ ಮುರಿದು ಅಪಾಯ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ

ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಸಮೀಪದ ಗಣೇಶ್ ಮೆಡಿಕಲ್ ಎದುರಿನ ಕಾಲುದಾರಿಗೆ ಅಳವಡಿಸಿದ್ದ ಒಳಚರಂಡಿಯ ಕಾಂಕ್ರೀಟ್ ಸ್ಲ್ಯಾಬ್ ಮುರಿದು ಬಿದ್ದು ಅಪಾಯಕಾರಿಯಾಗಿ ಪರಿಣಮಿಸಿದೆ. ಈ ಪ್ರದೇಶದಲ್ಲಿ ಪ್ರತಿದಿನ ನೂರಾರು ಮಂದಿ ಪಾದಚಾರಿಗಳು ಸಂಚರಿಸುತ್ತಿದ್ದು, ಮುರಿದಿರುವ ಕಾಂಕ್ರೀಟ್ನಿಂದ ಅಪಘಾತ ಸಂಭವಿಸುವ ಭೀತಿ ವ್ಯಕ್ತವಾಗಿದೆ.


ಸ್ಥಳೀಯರ ಪ್ರಕಾರ, ಈ ಸಮಸ್ಯೆ ಹಲವು ದಿನಗಳಿಂದ ಮುಂದುವರಿದಿದ್ದರೂ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.


ತಕ್ಷಣವೇ ಮುರಿದಿರುವ ಕಾಂಕ್ರೀಟ್ ಸ್ಲ್ಯಾಬ್ ದುರಸ್ತಿ ಮಾಡಿ ಸಾರ್ವಜನಿಕರ ಸುರಕ್ಷತೆ ಕಾಪಾಡಲು ಸಂಬಂಧಪಟ್ಟ ಇಲಾಖೆ ಮುಂದಾಗಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *