Breaking
26 Jun 2026, Fri

ಹಾಡಹಗಲೇ ಚಿನ್ನದ ಸರ ಕಳವು; ಓರ್ವ ಆರೋಪಿ ಬಂಧನ

ಕಾಸರಗೋಡು: ಹಾಡಹಗಲೇ ಮಹಿಳೆಯ ಕತ್ತಿನಲ್ಲಿದ್ದ ಎರಡು ಪವನ್ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಮಂಜೇಶ್ವರ ಠಾಣೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.


ಬಂಧಿತ ಆರೋಪಿಯನ್ನು ಕುಂಬಳೆ ಬಾಂಬ್ರಾಣದ ಎ. ಸಂದೀಪ್ (31) ಎಂದು ಗುರುತಿಸಲಾಗಿದೆ. ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.


ಸೋಮವಾರ ಸಂಜೆ ಸ್ಕೂಟರ್‌ನಲ್ಲಿ ಬಂದ ಇಬ್ಬರು ಆರೋಪಿಗಳು ಹೊಸಂಗಡಿ ಸಮೀಪ ದಾರಿ ಕೇಳುವ ನೆಪದಲ್ಲಿ ಪೈವಳಿಕೆ ಬಾಯಿಕಟ್ಟೆಯ ನಯನ ಎಂಬ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದರು.


ಈ ಕುರಿತು ದೊರೆತ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡ ಮಂಜೇಶ್ವರ ಠಾಣೆ ಪೊಲೀಸರು ತನಿಖೆ ಆರಂಭಿಸಿದರು. ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಮಾಹಿತಿ ಕಲೆಹಾಕಿದ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಇನ್ನೋರ್ವ ಆರೋಪಿಯ ಬಂಧನ, ಕಳವಾದ ಚಿನ್ನದ ಸರ ಹಾಗೂ ಬಳಸಿದ ಸ್ಕೂಟರ್ ಪತ್ತೆಗೆ ತನಿಖೆ ಚುರುಕುಗೊಳಿಸಲಾಗಿದೆ.

Leave a Reply

Your email address will not be published. Required fields are marked *