Breaking
25 Sep 2026, Fri

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ – ಪ್ರಯಾಣಿಕರು ಅಪಾಯದಿಂದ ಪಾರು

ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಮುಂಜಾನೆ ಸುಲ್ಕೇರಿ ಗ್ರಾಮದಲ್ಲಿ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ತೀವ್ರತೆಗೆ ಕಾಂಕ್ರೀಟ್ ಕಂಬ ಮುರಿದು ಕಾರಿನ ಮೇಲೆಯೇ ಬಿದ್ದಿದ್ದು, ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಪಘಾತದ ಪರಿಣಾಮ ಕಾರಿನ ಬಾನೆಟ್, ಬಂಪರ್ ಹಾಗೂ ಇಂಜಿನ್ ಭಾಗಕ್ಕೆ ಭಾರೀ ಹಾನಿಯಾಗಿದೆ. ಅಲ್ಲದೆ, ವಿದ್ಯುತ್ ತಂತಿಗಳು ತುಂಡಾಗಿ ರಸ್ತೆಯ ಮೇಲೆಯೇ ಬಿದ್ದಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ದುರಸ್ತಿ ಕಾರ್ಯ ಕೈಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.

ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಪಘಾತದ ಕುರಿತು ತನಿಖೆ ಆರಂಭಿಸಿದ್ದಾರೆ.

Leave a Reply

Your email address will not be published. Required fields are marked *