Breaking
27 Jun 2026, Sat

ಜೂನ್ 28ರಂದು ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

ಬೆಳ್ತಂಗಡಿ: ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಶಾಸಕರಾದ ಹರೀಶ್‌ ಪೂಂಜ ಅವರ ನೇತೃತ್ವದಲ್ಲಿ 2025–26ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಸಾರ್ವಜನಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿ (ಡಿಸ್ಟಿಂಕ್ಷನ್)ಯಲ್ಲಿ ಉತ್ತೀರ್ಣರಾದ ಬೆಳ್ತಂಗಡಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸುವ “ಶ್ರಮಿಕ ಪ್ರತಿಭಾ ವಿದ್ಯಾರ್ಥಿ” ಸನ್ಮಾನ ಕಾರ್ಯಕ್ರಮವನ್ನು ಜೂನ್ 28ರಂದು ಮೂರು ಕೇಂದ್ರಗಳಲ್ಲಿ ಆಯೋಜಿಸಲಾಗಿದೆ.


ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಂಬಂಧಿತ ವ್ಯಾಪ್ತಿಯ ಎಲ್ಲಾ ಡಿಸ್ಟಿಂಕ್ಷನ್ ಪಡೆದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಟ್ರಸ್ಟ್ನ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.


ಕಾರ್ಯಕ್ರಮದ ವಿವರ:
1) ಪೂರ್ವಾಹ್ನ 9.00 – ಸ್ವರಾಜ್ ಟವರ್ಸ್ ಸಭಾಭವನ, ಅಳದಂಗಡಿ
ಅಳದಂಗಡಿ ಹಾಗೂ ನಾರಾವಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ.
2) ಪೂರ್ವಾಹ್ನ 11.30 – ಸಂಗಮ ಸಭಾಭವನ, ಲಾಯಿಲ
ಕಣಿಯೂರು, ಕುವೆಟ್ಟು ಹಾಗೂ ಬೆಳ್ತಂಗಡಿ ನಗರ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ.
3) ಅಪರಾಹ್ನ 2.00 – ಅನುಗ್ರಹ ಚರ್ಚ್ ಸಭಾಭವನ, ಉಜಿರೆ
ಉಜಿರೆ, ಲಾಯಿಲ ಹಾಗೂ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ.


ಕಾರ್ಯಕ್ರಮದಲ್ಲಿ ಭಾಗವಹಿಸಲು ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ವಿವರಗಳೊಂದಿಗೆ ಸಮಯಕ್ಕೆ ಸರಿಯಾಗಿ ಹಾಜರಾಗುವಂತೆ ಸೂಚಿಸಲಾಗಿದೆ.

Leave a Reply

Your email address will not be published. Required fields are marked *