ಕಾರ್ಕಳ: ಸಾಣೂರು ಗ್ರಾಮದ ಪಿಲಿಕಲ್ಲು ಸಮೀಪ ಜೂ. 24ರಂದು ರಾತ್ರಿ ಸುಮಾರು 8 ಗಂಟೆ ವೇಳೆಗೆ ರಸ್ತೆ ಬದಿಯಲ್ಲಿ ಚಿರತೆ ಕಾಣಿಸಿಕೊಂಡ ಘಟನೆ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಪಿಲಿಕಲ್ಲು ಭಾಗದ ನಿವಾಸಿಯೊಬ್ಬರು ಕಾರ್ಕಳ ಪಟ್ಟಣದಿಂದ ಮನೆಗೆ ತೆರಳುತ್ತಿದ್ದ ವೇಳೆ ರಸ್ತೆ ದಾಟುತ್ತಿದ್ದ ಚಿರತೆಯನ್ನು ಗಮನಿಸಿದ್ದು, ಅದರ ದೃಶ್ಯವನ್ನು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ.

ಚಿರತೆ ಕಾಣಿಸಿಕೊಂಡ ಸ್ಥಳದ ಸಮೀಪದಲ್ಲೇ ಶಿಕ್ಷಣ ಸಂಸ್ಥೆಯಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಿತ್ಯ ಸಂಚಾರ ಮಾಡುವ ಪ್ರದೇಶವಾಗಿರುವುದರಿಂದ ಸ್ಥಳೀಯರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.

ಇದೇ ವೇಳೆ, ಘಟನೆಯ ಕುರಿತು ಅರಣ್ಯ ಇಲಾಖೆ ಪರಿಶೀಲನೆ ನಡೆಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.


