Breaking
27 Jun 2026, Sat

ಹೆದ್ದಾರಿ ದಾಟುತ್ತಿದ್ದ ಚಿರತೆಗೆ ವಾಹನ ಡಿಕ್ಕಿ – ಸ್ಥಳದಲ್ಲೇ ಸಾವು

ಹುಣಸೂರು ಸಮೀಪದ ಅರಬ್ಬಿತಿಟ್ಟು ವನ್ಯಧಾಮದ ಬಳಿ ಇರುವ ಹುಣಸೂರು–ಮೈಸೂರು ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.


ಮಾಹಿತಿಯ ಪ್ರಕಾರ, ಅರಬ್ಬಿತಿಟ್ಟು ಸಂರಕ್ಷಿತ ಅರಣ್ಯ ಪ್ರದೇಶದಿಂದ ಆಹಾರ ಅರಸಿ ಹೆದ್ದಾರಿ ಎದುರಿನ ರಕ್ಷಿತಾರಣ್ಯದ ಕಡೆಗೆ ಚಿರತೆ ರಸ್ತೆ ದಾಟುತ್ತಿದ್ದ ವೇಳೆ, ಹುಣಸೂರು ಕಡೆಯಿಂದ ಮೈಸೂರಿನತ್ತ ತೆರಳುತ್ತಿದ್ದ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಚಿರತೆ ಸ್ಥಳದಲ್ಲೇ ಮೃತಪಟ್ಟಿದೆ.


ಘಟನೆಯ ಮಾಹಿತಿ ತಿಳಿದ ತಕ್ಷಣ ಹುಣಸೂರು ಪ್ರಾದೇಶಿಕ ಅರಣ್ಯ ವಿಭಾಗದ ಡಿಆರ್ಎಫ್ಒ ರಮಣಗೌಡ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮಕ್ಕಾಗಿ ಮೈಸೂರು ಪ್ರಾದೇಶಿಕ ಅರಣ್ಯ ವಿಭಾಗದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.


ಇದೇ ವೇಳೆ ಬಿಳಿಕೆರೆ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪರಿಚಿತ ವಾಹನದ ಪತ್ತೆ ಹಾಗೂ ಘಟನೆಯ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *