ವಿಟ್ಲ: ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ ಘಟನೆ ವಿಟ್ಲ ಸಮೀಪದ ಮಂಗಿಲಪದವಿನಲ್ಲಿ ನಡೆದಿದೆ. ವಿಟ್ಲ ಕಸಬಾ ನಿವಾಸಿ ಲಕ್ಷ್ಮಣಗೌಡ (54) ಬಂಧಿತ ಆರೋಪಿಯಾಗಿದ್ದಾರೆ.

ವಿಟ್ಲ ಮಂಗಿಲಪದವು ಬಸ್ ತಂಗುದಾಣದ ಬಳಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದರು.
ದಾಳಿಯ ವೇಳೆ ವಿವಿಧ ಮಾದರಿಯ ಒಟ್ಟು 4.5 ಲೀಟರ್ ಮದ್ಯ ಹಾಗೂ ಮಾರಾಟದಿಂದ ಸಂಗ್ರಹವಾಗಿದ್ದ ₹300 ನಗದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.




