Breaking
29 Jun 2026, Mon

ವಿಟ್ಲ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಹಾಗೂ ವಿದ್ಯುತ್ ಕಂಬ ಬಿದ್ದು ಅವಘಡ; ದಂಪತಿ ಅಪಾಯದಿಂದ ಪಾರು

ವಿಟ್ಲ: ಪಡಿಬಾಗಿಲು ಸಮೀಪ ಸೋಮವಾರ (ಜೂ.29) ಬೆಳಗ್ಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಹಾಗೂ ವಿದ್ಯುತ್ ಕಂಬ ಬಿದ್ದ ಘಟನೆ ಸಂಭವಿಸಿದೆ. ಘಟನೆಯಲ್ಲಿ ಕಾರಿಗೆ ಹಾನಿಯಾಗಿದ್ದು, ಕಾರಿನಲ್ಲಿದ್ದ ದಂಪತಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.

ಕುದ್ದುಪದವು ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ ಸ್ವಿಫ್ಟ್ ಕಾರಿನ ಮೇಲೆ ರಸ್ತೆಬದಿಯ ಮರವೊಂದು ಬಿದ್ದಿದೆ. ಅವಘಡದಿಂದ ಕೆಲಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿ ಸಂಚಾರ ಸ್ಥಗಿತಗೊಂಡಿತ್ತು.
ಬಳಿಕ ಪೊಲೀಸರು, ಮೆಸ್ಕಾಂ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದೊಂದಿಗೆ ಮರ ಮತ್ತು ವಿದ್ಯುತ್ ಕಂಬವನ್ನು ತೆರವುಗೊಳಿಸಿ, ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಪುನರಾರಂಭಿಸಲಾಯಿತು.

Leave a Reply

Your email address will not be published. Required fields are marked *