Breaking
29 Jun 2026, Mon

ಶ್ರೀ ಬಾಲ ಗಣಪತಿ ದೇವಸ್ಥಾನ ಅನ್ನಪಾಡಿ–ಸಜೀಪ ಮೂಡ: ಭತ್ತದ ಬೇಸಾಯ ಹಾಗೂ ಕೆಸರುಗದ್ದೆ ಕ್ರೀಡಾಕೂಟಕ್ಕೆ ಚಾಲನೆ

ಬಂಟ್ವಾಳ: ಚತುರ್ಥಿಯಂದು ಭಕ್ತಾಭಿಮಾನಿಗಳಿಗೆ ಪೂರ್ವ ಶಿಷ್ಟ ಸಂಪ್ರದಾಯದಂತೆ ಮನೆ ತುಂಬಿಸಲು ತೆನೆ ವಿತರಣೆ ಮಾಡಲು ಅನುಕೂಲವಾಗುವ ಉದ್ದೇಶದಿಂದ ಶ್ರೀ ಬಾಲ ಗಣಪತಿ ದೇವಸ್ಥಾನ, ಅನ್ನಪಾಡಿ–ಸಜೀಪ ಮೂಡ ಶ್ರೀ ಕ್ಷೇತ್ರದ ಗದ್ದೆಯಲ್ಲಿ ಸಾಮೂಹಿಕ ಭತ್ತದ ಬೇಸಾಯ ಕಾರ್ಯಕ್ರಮ ಭಾನುವಾರ ನಡೆಯಿತು. ಇದರ ಅಂಗವಾಗಿ ಕೆಸರುಗದ್ದೆ ಕ್ರೀಡಾಕೂಟ ಉದ್ಘಾಟನಾ ಸಮಾರಂಭವೂ ಜರುಗಿತು.

ಕಾರ್ಯಕ್ರಮದಲ್ಲಿ ಸಜೀಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್, ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಯಶವಂತ ಪೂಜಾರಿ ದೇರಾಜೆಗುತ್ತು, ಮಾಜಿ ಶಾಸಕ ಕೆ. ರುಕ್ಮಯ್ಯ ಪೂಜಾರಿ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಕೆ. ರವೀಂದ್ರ ಕಂಬಳಿ, ಬಿಜೆಪಿ ಮುಖಂಡ ರವೀಂದ್ರ ಶೆಟ್ಟಿ ಉಳಿದೊಟ್ಟು, ಬಂಟ್ವಾಳ ಬಿಜೆಪಿ ಉಪಾಧ್ಯಕ್ಷ ಶ್ರೀಕಾಂತ್ ಶೆಟ್ಟಿ ಸಂಕೇಶ, ಶ್ರೀ ವಿನಾಯಕ ಶಂಕರ್ ನಾರಾಯಣ ದುರ್ಗಾಂಬ ಕ್ಷೇತ್ರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ, ಮಂಜಲ್ಪಾದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಂ. ಕೃಷ್ಣಶಾಂ, ಶಂಕರ ಯಾನೆ ಕೋಚ ಪೂಜಾರಿ, ಪ್ರದೀಪ್ ಶೆಟ್ಟಿ ಬಿಜಾಂತಾಡಿಗುತ್ತು, ಪ್ರೇಮ ಜಿ. ಶೆಟ್ಟಿ, ಚಿನ್ನಯ ಸಾಲಿಯಾನ, ಲಯನ್ ಸುಧಾಕರ ಆಚಾರ್ಯ, ಸಂಜೀವ ಪೂಜಾರಿ ಗುರು ಮಂದಿರ ಹಾಗೂ ಈಶ್ವರಮಂಗಲ ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗಿರೀಶ್ ಕುಮಾರ್ ಪೆರ್ವ, ಪಂಚಾಯತ್ ಮಾಜಿ ಅಧ್ಯಕ್ಷ ವಿಶ್ವನಾಥ ಬೆಳ್ಚಡ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಜೀವ ಪೂಜಾರಿ ಕುಚ್ಚಿಗುಡ್ಡೆ ವಹಿಸಿದ್ದರು. ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಜೀಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್, ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ಜನರ ಆರೋಗ್ಯ ಸುಧಾರಣೆಯ ಜೊತೆಗೆ ಪೌಷ್ಟಿಕಾಂಶಯುಕ್ತ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಬೆಳೆಗಳನ್ನು ಬೆಳೆಸುವ ಅಗತ್ಯವಿದೆ ಎಂದು ತಿಳಿಸಿದರು.

ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಯಶವಂತ ಪೂಜಾರಿ ದೇರಾಜೆಗುತ್ತು ಮಾತನಾಡಿ, ದೇವಸ್ಥಾನದ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯವಿದ್ದು, ಭಕ್ತರು ಹಾಗೂ ಸಾರ್ವಜನಿಕರು ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಗಣೇಶ್ ಚೇಳೂರು ಅಧ್ಯಕ್ಷರು, ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಬೋಳಿಯಾರು), ರಮೇಶ್ ಅನ್ನಪಾಡಿ, ದೇವದಾಸ ಅನ್ನಪಾಡಿ, ಸುರೇಶ್ ಪೂಜಾರಿ, ಸುರೇಶ್ ಬಂಗೇರ, ಲಿಂಗಪ್ಪ ದೋಟ, ಪ್ರಶಾಂತ್ ಪೂಜಾರಿ, ಪ್ರಮೋದ್ ಸಾನದ ಮನೆ ಹಾಗೂ ದೇವಾಲಯದ ಪ್ರಬಂಧಕ ಪ್ರಶಾಂತ್ ಕುಮಾರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *