Breaking
22 Aug 2026, Sat

ಸಜೀಪ ನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ ಪೂಜೆ

ಬಂಟ್ವಾಳ: ಸಜೀಪ ನಡು ಶ್ರೀ ಕ್ಷೇತ್ರದ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೌರ್ಣಮಿ ಪುಣ್ಯಕಾಲದ ಅಂಗವಾಗಿ ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ, ಕಥಾ ಪೂಜೆ ಹಾಗೂ ಅನ್ನದಾನ ಕಾರ್ಯಕ್ರಮ ಭಕ್ತಿಭಾವದಿಂದ ನಡೆಯಿತು.

ಕಾರ್ಯಕ್ರಮವು ಸಜೀಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ನೆರವೇರಿತು. ಪೂಜಾ ವಿಧಿವಿಧಾನಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಧಾರ್ಮಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಅರ್ಚಕ ಗಣಪತಿ ಮಹಾಬಲೇಶ್ವರ ಭಟ್, ಟ್ರಸ್ಟ್ ಅಧ್ಯಕ್ಷ ಕೆ. ರಾಧಾಕೃಷ್ಣ ಆಳ್ವ, ಸುಧಾಕರ ಕೆ.ಟಿ., ಪ್ರದೀಪ್ ಭಂಡಾರಿ, ಶಂಕರ ಪೂಜಾರಿ, ರಾಮ ಬರೆ, ಕಿಶನ್ ಸೇಣವ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *