ಆರಂಬೋಡಿ: ಬಿರ್ವೆರೆ ಕೂಟ ಆರಂಬೋಡಿ ಇವರ ಆಶ್ರಯದಲ್ಲಿ ದ್ವಿತೀಯ ವರ್ಷದ ಬೆನ್ನಿದ ಕಂಡೊಡು ಕೆಸರ್ದ ಗೊಬ್ಬು ಕಾರ್ಯಕ್ರಮವು ಜುಲೈ 5ರಂದು (ಆದಿತ್ಯವಾರ) ದೇಲೋಡಿ ಬರ್ಕೆ ಬಾಕಿಮಾರು ಗದ್ದೆ, ಆರಂಬೋಡಿಯಲ್ಲಿ ನಡೆಯಲಿದೆ.
ಬೆಳಿಗ್ಗೆ 8.30ರಿಂದ ಸಂಜೆ 5.00ರವರೆಗೆ ನಡೆಯಲಿರುವ ಈ ಕ್ರೀಡಾಕೂಟದಲ್ಲಿ ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕ ವಿಭಾಗಗಳಲ್ಲಿ ವಾಲಿಬಾಲ್, ತ್ರೋಬಾಲ್, ಹಗ್ಗ-ಜಗ್ಗಾಟ ಹಾಗೂ ರಿಲೇ ಹಾಗೂ ಇತರ ಮನೋರಂಜನಾ ಆಟೋಟ ಸ್ಪರ್ಧೆಗಳು ಮತ್ತು ಮಕ್ಕಳಿಗೆ ವಿವಿಧ ಮನೋರಂಜನಾ ಆಟೋಟ ಸ್ಪರ್ಧೆಗಳು ನಡೆಯಲಿವೆ.

ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಚಲನಚಿತ್ರ ನಟ, ತುಳುನಾಡ ಮಾಣಿಕ್ಯ ಅರವಿಂದ್ ಬೋಳಾರ್, ಚಲನಚಿತ್ರ ನಟ ಭೋಜರಾಜ್ ವಾಮಂಜೂರು, ಚಲನಚಿತ್ರ ನಿರ್ದೇಶಕ ಅನೀಶ್ ಪೂಜಾರಿ ವೇಣೂರು ಹಾಗೂ ವಿಶ್ವ ಕಪ್ ವಿಜೇತ ಭಾರತ ರಾಷ್ಟ್ರೀಯ ತಂಡದ ಕಬ್ಬಡಿ ಆಟಗಾರ್ತಿ ಧನಲಕ್ಷ್ಮಿ ಪೂಜಾರಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 3.00 ಗಂಟೆಗೆ ಸಾಧಕರಿಗೆ ಸನ್ಮಾನ ಹಾಗೂ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಿಸಲಾಗುವುದು.
ಸಾರ್ವಜನಿಕರು ಹಾಗೂ ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಬಿರುವೆರ್ ಕೂಟ, ಆರಂಬೋಡಿ ಮತ್ತು ಕ್ರೀಡೋತ್ಸವ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







