Breaking
30 Jun 2026, Tue

ಬಂಟ್ವಾಳ ತಾಲೂಕು ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ಬಂಟ್ವಾಳ: ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ದಿನದ ಅಂಗವಾಗಿ ಬಂಟ್ವಾಳ ತಾಲೂಕು ಆಸ್ಪತ್ರೆಯಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಬೇಬಿ ಕುಂದರ್ ಪುಟ್ಟ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ರಕ್ಷಣೆಗೆ ಪೋಲಿಯೋ ಲಸಿಕೆ ಅತ್ಯಂತ ಅವಶ್ಯಕವಾಗಿದೆ. ಕೇವಲ ಎರಡು ಹನಿ ಪೋಲಿಯೋ ಲಸಿಕೆ ಮಗುವಿನ ಆರೋಗ್ಯಕರ, ಸುರಕ್ಷಿತ ಹಾಗೂ ಉಜ್ವಲ ಭವಿಷ್ಯಕ್ಕೆ ಭದ್ರ ಕವಚವಾಗಲಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *