ಶಿವಮೊಗ್ಗ: ನಗರದ ಹೃದಯಭಾಗವಾದ ಬಿ.ಹೆಚ್. ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್ ಶಾಖೆಯಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿ, ಬ್ಯಾಂಕ್‌ನಲ್ಲಿದ್ದ ಕಂಪ್ಯೂಟರ್‌ಗಳು, ಪೀಠೋಪಕರಣಗಳು ಹಾಗೂ ಪ್ರಮುಖ ದಾಖಲೆಗಳು ಬೆಂಕಿಗಾಹುತಿಯಾಗಿವೆ.

ಮುಂಜಾನೆ ಬ್ಯಾಂಕ್ ಸಿಬ್ಬಂದಿ ಕಚೇರಿ ಬಾಗಿಲು ತೆರೆದಾಗ ಘಟನೆ ಬೆಳಕಿಗೆ ಬಂದಿದೆ. ಅವಘಡ ಸಂಭವಿಸಿದ ವೇಳೆ ಬ್ಯಾಂಕ್‌ನಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಪ್ರಾಥಮಿಕ ಮಾಹಿತಿಯಂತೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.







