Breaking
21 Aug 2026, Fri

ಧರ್ಮಸ್ಥಳದಲ್ಲಿ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಪಾದಚಾರಿ ಗಂಭೀರ ಗಾಯ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಕನ್ಯಾಡಿ ಮಸೀದಿ ಸಮೀಪ ಕೆಎಸ್ಆರ್‌ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಗಾಯಾಳುವಿನ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳೀಯರ ಸಹಕಾರದೊಂದಿಗೆ ಗಾಯಾಳುವನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಸಂಭವಿಸಿದ ವೇಳೆ ಪ್ರದೇಶದಲ್ಲಿ ಭಾರೀ ಮಳೆಯು ಸುರಿಯುತ್ತಿತ್ತು ಎನ್ನಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣದ ಕುರಿತು ತನಿಖೆ ಆರಂಭಿಸಿದ್ದಾರೆ.

Leave a Reply

Your email address will not be published. Required fields are marked *