Breaking
1 Jul 2026, Wed

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ: ಜು.2ರಂದು ಶಾಲೆ, ಕಾಲೇಜುಗಳಿಗೆ ರಜೆ

ಮಂಗಳೂರು: ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಹಲವು ಕಡೆಗಳಲ್ಲಿ ಗೋಡೆ ಕುಸಿತ ಸಂಭವಿಸಿದ್ದು, ಪ್ರಾಣಹಾನಿಯೂ ವರದಿಯಾಗಿದೆ.


ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜುಲೈ 2ರ ಗುರುವಾರ ರಜೆ ಘೋಷಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಆದೇಶ ಹೊರಡಿಸಿದ್ದಾರೆ.


ತಗ್ಗು ಪ್ರದೇಶಗಳು, ಕೆರೆ, ನದಿ ತೀರ ಹಾಗೂ ಸಮುದ್ರ ತೀರ ಪ್ರದೇಶಗಳಿಗೆ ಮಕ್ಕಳು ಹೋಗದಂತೆ ಪಾಲಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಅದೇ ರೀತಿ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Leave a Reply

Your email address will not be published. Required fields are marked *