Breaking
2 Jul 2026, Thu

ಗುಂಡ್ಯದಲ್ಲಿ ಕಾರು ಅಪಘಾತ; ಚಿಕಿತ್ಸೆ ಫಲಿಸದೆ ಮಹಿಳೆ ಸಾವು

ಉಪ್ಪಿನಂಗಡಿ: ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಹೆದ್ದಾರಿಯ ತಿರುವಿನಲ್ಲಿ ಜುಲೈ 1ರಂದು ನಡೆದಿದೆ.

ಅಪಘಾತದಲ್ಲಿ ಗಾಯಗೊಂಡಿದ್ದ ವಾಗ್ದೇವಿ ಅವರನ್ನು ತುರ್ತುವಾಗಿ ಆಂಬುಲೆನ್ಸ್ ಮೂಲಕ ಉಡುಪಿಯ ಆಸ್ಪತ್ರೆಗೆ ಸಾಗಿಸಲಾಯಿತು. ಈ ವೇಳೆ ದಾರಿ ಮಧ್ಯೆಯೇ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಆಸ್ಪತ್ರೆಗೆ ತಲುಪಿದ ಬಳಿಕ ವೈದ್ಯರು ಪರೀಕ್ಷಿಸಿ ಅವರು ಮೃತಪಟ್ಟಿರುವುದಾಗಿ ಘೋಷಿಸಿದರು ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *