Breaking
2 Jul 2026, Thu

ಬೆಳ್ತಂಗಡಿ: ವಿದ್ಯುತ್ ಸಬ್‌ಸ್ಟೇಷನ್ ಬಳಿ ಯುವಕನ ಮೃತದೇಹ ಪತ್ತೆ

ಬೆಳ್ತಂಗಡಿ: ಗುರುವಾಯನಕೆರೆ ಸಮೀಪದ ಖಾಸಗಿ ವಿದ್ಯುತ್ ಸಬ್‌ಸ್ಟೇಷನ್ ಜಾಗದಲ್ಲಿ 27 ವರ್ಷದ ಯುವಕನ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಜುಲೈ 1ರ ಬುಧವಾರ ಪತ್ತೆಯಾಗಿದೆ.

ಮೃತರನ್ನು ತಣ್ಣೀರುಪಂತದ ಕಲ್ಲೇರಿ ಜನತಾ ಕಾಲೋನಿ ನಿವಾಸಿ ಶರೀಫ್ ಕೆ. ಅವರ ಪುತ್ರ ಮುಸ್ತಾಕ್ ಎಂದು ಗುರುತಿಸಲಾಗಿದೆ.

ಕುವೆಟ್ಟು ಗ್ರಾಮದ ಶಕ್ತಿನಗರ ಸಮೀಪದ ಸಬ್‌ಸ್ಟೇಷನ್ ಮುಂಭಾಗದ ತಡೆಗೋಡೆಯ ಕೆಳಭಾಗದ ಇಳಿಜಾರು ಪ್ರದೇಶದಲ್ಲಿ ಮೃತದೇಹ ಪತ್ತೆಯಾಗಿದೆ.

ಚಾಲಕನಾಗಿ ಕೆಲಸ ಮಾಡುತ್ತಿದ್ದ ಮುಸ್ತಾಕ್ ಅವರನ್ನು ಜೂನ್ 30ರಂದು ಅವರ ತಮ್ಮ ಮುನಾಸೀರ್, ಕಲ್ಲೇರಿಯಿಂದ ಮದ್ದಡ್ಕಕ್ಕೆ ಬೈಕ್‌ನಲ್ಲಿ ಬಿಟ್ಟು ಹೋಗಿದ್ದರು ಎಂದು ತಿಳಿದುಬಂದಿದೆ.

ಮಾಹಿತಿ ತಿಳಿದು ಬೆಳ್ತಂಗಡಿ ಠಾಣಾ ಪೊಲೀಸರು, ಸೋಕೋ ತಂಡ ಹಾಗೂ ಕುವೆಟ್ಟು ಗ್ರಾಮ ಪಂಚಾಯತ್ ಪಿಡಿಒ ಇಮ್ತಿಯಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *