ಮಣಿಪಾಲ: ಖಾಸಗಿ ಬಸ್‌ನ ಏಣಿಯಲ್ಲಿ ಹಾಗೂ ಮೆಟ್ಟಲಿನಲ್ಲಿ ನೇತಾಡಿಕೊಂಡು ವಿದ್ಯಾರ್ಥಿಗಳು ಪ್ರಯಾಣಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ವೈರಲ್ ಆಗಿರುವ ಈ ದೃಶ್ಯ ಉಡುಪಿ ಜಿಲ್ಲೆಯ ಹರಿಖಂಡಿಗೆ–ಪೆರ್ಡೂರು ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್‌ನದ್ದು ಎಂದು ಹೇಳಲಾಗಿದೆ. ಬಸ್‌ನಲ್ಲಿ ಅತಿಯಾದ ಜನದಟ್ಟಣೆ ಇದ್ದ ಕಾರಣ ಕೆಲ ವಿದ್ಯಾರ್ಥಿಗಳು ಏಣಿಯಲ್ಲಿ ಹಾಗೂ ಮೆಟ್ಟಲಿನಲ್ಲಿ ನೇತಾಡಿಕೊಂಡು ಅಪಾಯಕಾರಿಯಾಗಿ ಪ್ರಯಾಣಿಸುತ್ತಿರುವುದು ವಿಡಿಯೋದಲ್ಲಿ ಕಾಣಿಸಿಕೊಂಡಿದೆ.

ಈ ಘಟನೆಗೆ ಸಾರ್ವಜನಿಕರು ತೀವ್ರ ಕಳವಳ ವ್ಯಕ್ತಪಡಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಾರಿಗೆ ಇಲಾಖೆ ಪರಿಶೀಲನೆ ನಡೆಸಿ, ಈ ಮಾರ್ಗದಲ್ಲಿ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ವಿಶೇಷವಾಗಿ ಬೆಳಗ್ಗೆ ಮತ್ತು ಸಂಜೆ ವೇಳೆಯಲ್ಲಿ ಬಸ್‌ಗಳ ಸಂಚಾರ ಹೆಚ್ಚಿಸಬೇಕು ಎಂಬ ಬೇಡಿಕೆ ಕೇಳಿಬಂದಿದೆ. ಹರಿಖಂಡಿಗೆ–ಮಾಣೈ–ಹಿರಿಯಡಕ ಮಾರ್ಗದಲ್ಲಿಯೂ ಬಸ್‌ಗಳ ಕೊರತೆಯಿಂದ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳು ಪ್ರತಿದಿನ ಸಂಕಷ್ಟ ಎದುರಿಸುತ್ತಿದ್ದಾರೆ.






