Breaking
2 Jul 2026, Thu

ದೇವದುರ್ಗ: ಟೈರ್ ಸ್ಫೋಟಗೊಂಡು ಹೊತ್ತಿ ಉರಿದ ಟಿಪ್ಪರ್; ತಪ್ಪಿದ ಭಾರೀ ಅನಾಹುತ

ರಾಯಚೂರು: ದೇವದುರ್ಗ ತಾಲೂಕಿನ ಶಿರವಾರ ಕ್ರಾಸ್ ಸಮೀಪ ಚಲಿಸುತ್ತಿದ್ದ ಟಿಪ್ಪರ್‌ನ ಟೈರ್ ಸ್ಫೋಟಗೊಂಡು ವಾಹನಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ಜು.2ರ ಗುರುವಾರ ಬೆಳಗ್ಗೆ ನಡೆದಿದೆ.

ಶಿರವಾರ ಕ್ರಾಸ್ ಬಳಿ ಮರಳು ಸಾಗಿಸುತ್ತಿದ್ದ ಟಿಪ್ಪರ್‌ನ ಟೈರ್ ಏಕಾಏಕಿ ಸ್ಫೋಟಗೊಂಡಿದ್ದು, ಅದರ ಪರಿಣಾಮ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿ ಟಿಪ್ಪರ್‌ನ ಬಹುತೇಕ ಭಾಗ ಸುಟ್ಟು ಹಾನಿಗೊಳಗಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಇದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ. ಘಟನೆಯಲ್ಲಿ ಟಿಪ್ಪರ್‌ಗೆ ಭಾರೀ ಪ್ರಮಾಣದ ಹಾನಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಬೆಂಕಿ ಅವಘಡದಿಂದ ಕೆಲಕಾಲ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಗಿತ್ತು. ಟೈರ್ ಸ್ಫೋಟಕ್ಕೆ ನಿಖರ ಕಾರಣವೇನು ಎಂಬ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *