ಮೂಡುಬಿದಿರೆ: ಒಂದು ದಿನದಿಂದ ನಾಪತ್ತೆಯಾಗಿದ್ದ ಅಲಂಗಾರು ಆಶ್ರಯ ಕಾಲೋನಿ ಸಮೀಪದ ಬಂಗೇರಬೆಟ್ಟು ನಿವಾಸಿ ಕಾರ್ತಿಕ್ ಶೆಟ್ಟಿ (34) ಅವರ ಮೃತದೇಹ ಇಂದು (ಜು.4) ಮನೆಯ ಸಮೀಪದ ಶೆಡ್ ಹೊರಭಾಗದಲ್ಲಿ ಪತ್ತೆಯಾಗಿದೆ.

ಅವಿವಾಹಿತರಾಗಿದ್ದ ಕಾರ್ತಿಕ್ ಶೆಟ್ಟಿ ಹಿಟಾಚಿ ಹಾಗೂ ಜೆಸಿಬಿ ಗುತ್ತಿಗೆದಾರರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಹೃದಯಾಘಾತದಿಂದ ಮೃತಪಟ್ಟಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿಯಲಿದೆ.

ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.



