ಉಪ್ಪಿನಂಗಡಿ: ಕಂಟೈನರ್‌ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ನಡೆದಿದೆ.

ಬೇಲೂರು ತಾಲೂಕಿನ ಸೋಂಪುರ ನಿವಾಸಿ ಹರ್ಷ ಟಿ. ಅವರು ಮಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ತಮ್ಮ ಮಗಳನ್ನು ಕರೆತರಲು ಕಾರಿನಲ್ಲಿ ತೆರಳುತ್ತಿದ್ದ ವೇಳೆ, ಗುಂಡ್ಯದ ತಿರುವು ರಸ್ತೆಯಲ್ಲಿ ಕಂಟೈನರ್ ಚಾಲಕ ಸಂಚಾರಿ ನಿಯಮ ಉಲ್ಲಂಘಿಸಿ ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಅಪಘಾತದ ಪರಿಣಾಮ ಕಾರು ಹಾನಿಗೊಳಗಾಗಿದ್ದು, ಕಾರಿನಲ್ಲಿದ್ದ ಹರ್ಷ ಟಿ. ಅವರು ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.
ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.





