Breaking
22 Aug 2026, Sat

ಮಳೆಗೆ ಮನೆ ಮೇಲೆ ಮರ ಬಿದ್ದು ಹಾನಿ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತ್ವರಿತ ತೆರವು ಕಾರ್ಯ

ಕಲ್ಲಡ್ಕ: ಬಂಟ್ವಾಳ ತಾಲೂಕಿನ ಬೋಳಂತೂರು ಗ್ರಾಮದ ನಾರಂಕೋಡಿ ನಿವಾಸಿ ವೆಂಕಪ್ಪ ಜಿ. ಅವರ ಮನೆಗೆ ಭಾರೀ ಮಳೆಯ ಪರಿಣಾಮ ಮರ ಬಿದ್ದು ಅಲ್ಪ ಪ್ರಮಾಣದ ಹಾನಿ ಸಂಭವಿಸಿದೆ.

ಮಾಹಿತಿ ತಿಳಿಯುತ್ತಿದ್ದಂತೆಯೇ ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಕಲ್ಲಡ್ಕ ಘಟಕದ ಸದಸ್ಯರು ಸ್ಥಳಕ್ಕೆ ಧಾವಿಸಿ, ಮರವನ್ನು ಸುರಕ್ಷಿತವಾಗಿ ತೆರವುಗೊಳಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

ಈ ಕಾರ್ಯಾಚರಣೆಯಲ್ಲಿ ಘಟಕದ ಸದಸ್ಯರಾದ ರವಿಚಂದ್ರ, ಗಣೇಶ್ ನಾಯ್ಕ್, ಧನಂಜಯ, ಹರೀಶ್ ಹಾಗೂ ಸ್ಥಳೀಯರಾದ ಚರಣ್ ಮತ್ತು ಹಮೀದ್ ಭಾಗವಹಿಸಿ ಕಾರ್ಯನಿರ್ವಹಿಸಿದರು.

Leave a Reply

Your email address will not be published. Required fields are marked *