ಬಂಟ್ವಾಳ: ತುಳುನಾಡ ಪೊರ್ಲು ಸೇವಾ ಟ್ರಸ್ಟ್ (ರಿ.) ವತಿಯಿಂದ 617ನೇ ಸೇವಾ ಯೋಜನೆಯ ಅಂಗವಾಗಿ ಕ್ಯಾನ್ಸರ್‌ನಿಂದ ಬಳಲುತ್ತಿರುವ ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ನೆಹರುನಗರ ನಿವಾಸಿ ಶ್ರೀ ದೀಪಕ್ ದೇವಾಡಿಗ ಅವರ ವೈದ್ಯಕೀಯ ಚಿಕಿತ್ಸೆಗೆ ₹20,000 ಧನಸಹಾಯವನ್ನು ಭಾನುವಾರ ಬಿ.ಸಿ.ರೋಡ್‌ನ ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಯಲ್ಲಿ ಹಸ್ತಾಂತರಿಸಲಾಯಿತು.

ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಸೇವಾ ಮಾಣಿಕ್ಯರು ಉಪಸ್ಥಿತರಿದ್ದರು. ಸೇವಾ ಕಾರ್ಯಕ್ಕೆ ಧನಸಹಾಯ ಹಾಗೂ ಸಹಕಾರ ನೀಡಿದ ಎಲ್ಲಾ ದಾನಿಗಳು, ಸೇವಾ ಬಂಧುಗಳು ಮತ್ತು ಹಿತೈಷಿಗಳಿಗೆ ಟ್ರಸ್ಟ್ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.




